Karnataka NewsLatest

*ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ವಸ್ತುಗಳ ಜಪ್ತಿ: ಇಬ್ಬರು ಆರೋಪಿಗಳು ಅರೆಸ್ಟ್*

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಕ್ಕೆ ಸಿಎಂ ಶ್ಲಾಘನೆ

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ ಎಂದಿದ್ದಾರೆ.

Home add -Advt

ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.


Related Articles

Back to top button