ಕೆಂಜಾರು ಮೈದಾನದಲ್ಲಿ ಬಾಂಬ್ ನ್ನು ಸ್ಫೋಟಿಸಿ ನಿಷ್ಕ್ರಿಯಗೊಳಿಸಿದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಜೀವ ಬಾಂಬ್ ನ್ನು ಕೆಂಜಾರು ಮೈದಾನದ ನಿರ್ಜನ ಪ್ರದೇಶದಲ್ಲಿ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಗಳು ಬಾಂಬ್ ನ್ನು ಸ್ಫೋಟಿಸಿ, ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಿಗ್ಗೆ ಮಂಗಳೂರು ಏರ್ ಪೋರ್ಟ್ ನ ಟಿಕೆಟ್ ಕೌಂಟರ್ ಬಳಿ ಲ್ಯಾಪ್ ಟಾಪ್ ಬ್ಯಾಗ್ ಒಂದು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಸ್ಥಳಕ್ಕೆ ದೌಡಾಯಿಸದ ಪೊಲೀಸರು ಬ್ಯಾಗ್ ಪರಿಶೀಲಿಸಿದಾಗ ಬಾಂಬ್ ಇರುವುದು ಖಚಿತವಾಗಿತ್ತು.

ಬ್ಯಾಗ್ ನಲ್ಲಿ ಸಜೀವ ಬಾಂಬ್ ಇರುವುದು ಖಚಿತವಾಗುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಬ್ಯಾಗ್ ಸಮೇತ ಬಾಂಬ್ ನ್ನು ಸುರಕ್ಷಿತ ವಾಹನದಲ್ಲಿ ಇರಿಸಿ, ಕೆಂಜಾರು ಮೈದಾನದ ನಿರ್ಜನ ಪ್ರದೇಶಕ್ಕೆ ತೆಗೆದುಕೊಂಡು ಹೋದರು. ಬಳಿಕ ಅಲ್ಲಿ ಖಾಲಿ ಜಾಗದಲ್ಲಿ ಮರಳಿನ ಮೂಟೆಗಳ ನಡುವೆ ಬಾಂಬ್ ಇರಿಸಿ ಸಂಜೆ 5:30ರ ಸಮಯದಲ್ಲಿ ಸ್ಫೋಟಿಸುವ ಮೂಲಕ ನಿಷ್ಕ್ರಿಯಗೊಳಿಸಿದರು.

ಇನ್ನು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರು ಏರ್ ಪೋರ್ಟ್ ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಬೆಳಿಗ್ಗೆ ನೀಲಿಬಣ್ಣದ ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಆಟೋದಲ್ಲಿ ಬಂದು ವಿಮಾನ ನಿಲ್ದಾಣದ ಬಳಿ ಇಳಿದುಬರುತ್ತಿರುವ ಶಂಕಿತನ ಫೋಟೋ ಹಾಗೂ ಆಟೋ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button