Kannada NewsKarnataka NewsLatest

*ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ವಿಡಿಯೋ ವೈರಲ್: 8 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತೆ ಬಾಲಕಿಯ ಮೇಲೆ ಕಾಮುಕರಿಬ್ಬರೂ ಸಾಮೂಹಿಕ ಅತ್ಯಾಚರವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.

ಅತ್ಯಾಚಾರವೆಸಗಿ ವಿಡಿಯೋ ವೈರಲ್ ಮಾಡಲಾಗಿತ್ತು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದರು. ಅತ್ಯಾಚಾರ ಹಾಗೂ ವಿಡಿಯೋ ವೈರಲ್ ಮಾಡಿದ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಜೂನ್ ನಲ್ಲಿ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಓರ್ವ ಆರೋಪಿ ಬಾಲಕಿಯನ್ನು ಇನ್ ಸ್ಟಾ ಗ್ರಾಂ ನಲ್ಲಿ ಪರಿಚಯಿಸಿಕೊಂಡಿದ್ದ. ಬಳಿಕ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಓರ್ವ ಆರೋಪಿ ಅತ್ಯಾಚಾರವೆಸಗಿದ್ದು, ಇನ್ನೋರ್ವ ಆರೋಪಿ ವಿಡಿಯೋ ಮಾಡಿದ್ದ. ಅತ್ಯಾಚರದ ವಿಡಿಯೋವನ್ನು ದುಷ್ಕರ್ಮಿಗಳು ಸ್ನೇಹಿತರಿಗೆ ಕಳುಹಿಸಿದ್ದರು. ಸ್ನೇಹಿತರ ವಿಡಿಯೋ ವೈರಲ್ ಮಾಡಿದ್ದರು. ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button