Film & EntertainmentKannada NewsKarnataka NewsLatest

*ಸ್ವಂತ ಸಹೋದರಿ ವಿರುದ್ಧವೇ ಸೈಬರ್ ಠಾಣೆಗೆ ದೂರು ನೀಡಿದ ನಟಿ ಕಾರುಣ್ಯ ರಾಮ್*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಖ್ಯಾತ ನಟಿ ಕಾರುಣ್ಯ ರಾಮ್ ತನ್ನ ತಂಗಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಟಿ ಕಾರುಣ್ಯ ರಾಮ್ ಸಹೋದರಿ ಸಮೃದ್ಧಿ ರಾಮ್ ವಿರುದ್ಧ 25 ಲಕ್ಷ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್, ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಹಾಗೂ ಸಾಗರ್ ಎಂಬುವವರ ವಿರುದ್ಧ ಕಾರುಣ್ಯ ರಾಮ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಹೋದರಿ ಸಮೃದ್ಧಿ ರಾಮ್, ಮೇಕಪ್ ಆರ್ಟಿಸ್ಟ್ ಆಗಿದ್ದು, ಬೆಟ್ಟಿಂಗ್ ನಲ್ಲಿ 25 ಲಕ್ಷ ಹಣ ಕಳೆದುಕೊಂಡಿದ್ದಾಳೆ. ಸಾಲ ಮಾಡಿಕೊಂಡಿದ್ದು, ವ್ಯವಹಾರದಲ್ಲಿಯೂ ಅಪಾರ ನ್ಬಷ್ಟ ಅನುಭವಿಸಿದ್ದಾಳೆ. ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದುಕೊಂಡಿದ್ದರಿಂದ ಸಾಲಗಾರರು ಮನೆ ಬಳಿ ಬಂದು ಕಾಟಕೊಡುತ್ತಿದ್ದಾರೆ. ಅಲ್ಲದೇ ಸಾಲ ತೀರಿಸಲು ಮನೆಯಲ್ಲಿದ್ದ ಹಣ, ಚಿನ್ನವನ್ನು ಬಳಸಿಕೊಂಡು ವಂಚಿಸಿದ್ದಾಳೆ.

ನನ್ನ ಹಣವನ್ನು ಬಳಸಿಕೊಂಡಿದ್ದಕ್ಕೆ ಪ್ರಶ್ನೆ ಮಾಡಿದ್ದಕ್ಕೆ ಸಮೃದ್ಧಿ, ನನ್ನನ್ನು ಮನೆಯಿಂದ ಹೊರ ಹಾಕಿದ್ದಾಳೆ. ವಾಟ್ಸಪ್ ನಲ್ಲಿ ಅಶ್ಲೀಲ ಸಂದೇಶ, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳಿಗೆ ಕೆಟ್ಟದಾಗಿ ಕಮೆಂಟ್ ಮಾಡಿ ನಿಂದಿಸುವುದು ಮಾಡುತ್ತಿದ್ದಾಳೆ ಎಂದು ದೂರು ನೀಡಿದ್ದಾರೆ.

ಈ ಹಿಂದೆ ಕೂಡ ಕಾರುಣ್ಯ ರಾಮ್ ಸಮೃದ್ಧಿ ರಾಮ್ ವಿರುದ್ಧ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button