
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಂಗಳೂರು ವಿ.ವಿ.ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ವಿಧಾನ ಪರಿಷತ್ತಿನ ಕಲಾಪದಲ್ಲಿಂದು ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ ಸಚಿವರು ಮಾತನಾಡಿದರು.
ಮಂಗಳೂರು ವಿ.ವಿ.ಯ ಮೊದಲ ಸೆಮಿಸ್ಟರ್ ಫಲಿತಾಂಶ ಇದುವರೆಗೂ ಪ್ರಕಟವಾಗಿರುವುದಿಲ್ಲ. ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನಕ್ಕೆ ಅಜಿ ಸಲ್ಲಿಸಲೂ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಮಂಗಳೂರು ವಿವಿಯು ನ್ಯಾಕ್ ‘ಎ’ ಗ್ರೇಡ್‍ನಲ್ಲಿತ್ತು. ಈಗ ‘ಬಿ’ ಗ್ರೇಡ್‍ಗೆ ಬಂದಿದೆ. ವಿರ್ಶವವಿದ್ಯಾಲಯದ ಗುಣಮಟ್ಟ ಪುನಃ ಉತ್ತಮಪಡಿಸಲು ಕ್ರಮವಹಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.
*ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್*
https://pragati.taskdun.com/one-lakh-postjobcm-basavaraj-bommaividhanaparishath/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ