Latest

*ನರ್ಸಿಂಗ್, ಪ್ಯಾರಾಮೆಡಿಕಲ್ ನ 137 ವಿದಾರ್ಥಿಗಳು ಅಸ್ವಸ್ಥ; 12 ಜನರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಹಾಸ್ಟೇಲ್ ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ನ 137 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ನಡೆದಿದೆ.

12 ವಿದ್ಯಾರ್ಥಿನಿ ಯರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರಿಗೆ ಫುಡ್ ಪಾಯಿಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಆಸ್ಪತ್ರೆ ಮುಂದೆ ಜಮಾವಣೆಗೊಮ್ಡಿರುವ ಪೋಷಕರು ನರ್ಸಿಂಗ್ ಕಾಲೇಜು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 137 ವಿದ್ಯಾರ್ಥಿಗಳನ್ನು ಮಂಗಲೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ನಗರ ಪೊಲಿಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related Articles

Back to top button