
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಹಾಡ ಹಗಲೇ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್, ಮಹಿಳಾ ಪೊಲೀಸರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಂದರು ಠಾಣಾ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ