Latest

ಆಟೋದಲ್ಲಿ ನಿಗೂಢ ಸ್ಫೋಟ; ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರಿನ ಕಂಕನಾಡಿ ನಾಗರಿ ಬಳಿ ನಿನ್ನೆ ರಾತ್ರಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಸ್ಫೋಟದ ರಭಸಕ್ಕೆ ಆಟೋದಲ್ಲಿದ್ದ ಕುಕ್ಕರ್ ಛಿದ್ರ ಛಿದ್ರಗೊಂಡಿತ್ತು. ಘಟನೆಯಲ್ಲಿ ಆಟೋ ಚಾಲಕ ಹಾಗೂ ಪ್ರಯಾಣಿಕ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದು ಉಗ್ರರ ಕೃತ್ಯ ಎಂಬುದು ಬಯಲಾಗಿದ್ದು, ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಆತನಿಗೂ ಗಂಭೀರ ಗಾಯಗಳಾಗಿದ್ದು, ಮಾತನಾಡುವ ಸ್ಥಿತಿಯಲ್ಲಿಲ್ಲ ಎನ್ನಲಾಗಿದೆ. ಕೃತ್ಯಕ್ಕೆ ಪ್ಲಾನ್ ಮಾಡಿದ ಸ್ಥಳಕ್ಕೆ ಸ್ಫೋಟಕ ಕೊಂಡೊಯ್ಯುವಾಗ ದಾರಿ ಮಧ್ಯೆಯೇ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Home add -Advt

ಆಟೋದಲ್ಲಿ ನಿಗೂಢ ಸ್ಫೋಟ; ಕಡಲ ನಗರಿಯಲ್ಲಿ ಉಗ್ರರ ಕೃತ್ಯ; DGP ಪ್ರವೀಣ್ ಸೂದ್

https://pragati.taskdun.com/mangaloreauto-blastterrorrist-planedgp-praveen-sood/

 

Related Articles

Back to top button