
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾಗೆ ಜೀವ ಬೆದರಿಕೆ ಹಾಕಲಾಗಿದೆಯಂತೆ. ಈ ಬಗ್ಗೆ ಸ್ವತಃ ಸಂಸದೆ ಸುಮಲತಾ ತಿಳಿಸಿದ್ದಾರೆ.
ದಿಶಾ ಸಭೆಯಲ್ಲಿ ಮಾತನಾಡಿದ ಸಂಸದೆ ಸುಮಲತಾ, ಕೆ.ಆರ್. ಎಸ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ವಿರುದ್ಧ ನಿರಂತರ ಹೋರಾಟ ಮಾಡಿದ್ದಕ್ಕೆ ನನಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಅಕ್ರಮ ಗಣಿಗಾರಿಕೆ ವಿರುದ್ಧ ನಿರಂತರ ಹೋರಾಟ ಮಾಡಿದ್ದೆ. ಅದರ ಫಲವಾಗಿ ನನಗೆ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಕೆ.ಆರ್.ಎಸ್ ಸುತ್ತಮುತ್ತ ಗಣಿಗಾರಿಕೆ ನಡೆಸದಂತೆ ಹೈಕೋರ್ಟ್ ಆದೇಶವಿದ್ದರೂ ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.