Latest

ನೆಲ್ಯಾಡಿ ಭೀಕರ ಅಪಘಾತಕ್ಕೆ ಹೊತ್ತಿ ಉರಿದ ಬಸ್; ಕೂದಲೆಳೆ ಅಂತರದಲ್ಲಿ ಪಾರಾದ ಖ್ಯಾತ ನಟಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ನಡುವೆ ದಕ್ಷಿಣ ಕನ್ನಡ ಜಿಲ್ಲೆ ನೆಲ್ಯಾಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತುಳು ಸಿನಿಮಾದ ಖ್ಯಾತ ನಟಿ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.

ಬಸ್ ಹಾಗೂ ಲಾರಿ ನಡುವೆ ಸಂಭವಿದಿ ಡಿಕ್ಕಿ ರಭಸಕ್ಕೆ ಎರಡೂ ವಾಹನಗಳು ಹೊತ್ತಿ ಉರಿದಿವೆ. ಕ್ಷಣಾರ್ಧದಲ್ಲಿ ವಾಹನಗಳೆರಡೂ ಸುಟ್ಟು ಕರಕಲಾಗಿವೆ. ಬಸ್ ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರಲ್ಲಿ ತುಳು ಚಿತ್ರರಂಗದ ಖ್ಯಾತ ನಟಿ ನೀಮಾ ರೇ ಕೂಡ ಇದ್ದರು. ಅಪಘಾತದಲ್ಲಿ ಎಲ್ಲರೂ ಪಾರಾಗಿದ್ದಾರೆ

Home add -Advt

ಈ ಬಗ್ಗೆ ಪ್ರತಿಕ್ರಿಯಿಸಿರುವ ನೀಮಾ ರೇ, ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನಲ್ಲಿ ಹೊಗೆ ಕಾಣಿಸಿಕೊಳ್ಳಲಾರಂಭಿಸಿತು. ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಲು ಮುಂದಾದರು ಆದರೆ ಡೋರ್ ಜಾಮ್ ಆಗಿ ಲಾಕ್ ಆಗಿದ್ದರಿಂದ ತುಂಬಾ ಕಷ್ಟವಾಯಿತು. ಹೇಗೋ ಹೊರಗೆ ಬಂದೆವು. ನನಗೆ ಯಾವುದೇ ತೊಂದರೆಯಾಗಿಲ್ಲ. ಆದರೆ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಬಸ್ ನಿಂದ ಕೆಳಗಿಳಿಯುವುದು ಸ್ವಲ್ಪ ತಡವಾಗಿದ್ದರೂ ಅನಾಹುತ ಸಂಭವಿಸುತ್ತಿತ್ತು ಎಂದು ಹೇಳಿದ್ದಾರೆ.

ಲಾರಿ-ಬಸ್ ನಡುವೆ ಮುಖಾಮುಖಿ ಡಿಕ್ಕಿ; ಹೊತ್ತಿ ಉರಿದ ವಾಹನಗಳು

Related Articles

Back to top button