ಪ್ರಗತಿವಾಹಿನಿ ಸುದ್ದಿ; ಮಂಗಳೂರು: ದುಬೈನಿಂದ ಆಗಮಿಸಿದ್ದ ಪ್ರಯಾಣಿಕನೊಬ್ಬನಲ್ಲಿ ಕೊರೊನಾ ಸೋಂಕು ಶಂಕೆ ಕಂಡುಬಂದ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆ ವ್ಯಕ್ತಿ ರಾತ್ರೋರಾತ್ರಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.
ಪ್ರಯಾಣಿಕ ಭಾನುವಾರ ತಡ ರಾತ್ರಿ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಸ್ಕ್ರೀನಿಂಗ್ ವೇಳೆ ಟೆಂಪರೇಚರ್ ನಲ್ಲಿ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಪ್ರಯಾಣಿಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಈ ವೇಳೆ ಆರೋಗ್ಯಾಧಿಕಾರಿಗಳು ಸ್ಯಾಂಪಲ್ ತೆಗೆದು ಲ್ಯಾಬ್‍ಗೆ ರವಾನಿಸಿದ್ದು, ಕೊರೊನಾ ಇರೋ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಆತನನ್ನು ಐಸೋಲೇಶನ್ ವಾರ್ಡ್‍ಗೆ ಸಿಬ್ಬಂದಿ ರವಾನಿಸಿದ್ದರು. ಆದರೆ ಆತ ರಾತ್ರೋರಾತ್ರಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದು, ಕರಾವಳಿಯಲ್ಲಿ ಆತಂಕ ಸೃಷ್ಟಿಸಿದ್ದಾನೆ.
ಈ ಸಂಬಂಧ ಆರೋಗ್ಯಾಧಿಕಾರಿ ಕೂಡಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಮಂಗಳೂರು ಆಸ್ಪತ್ರೆಯಿಂದ ಎಸ್ಕೇಪ್ ಆದ ವ್ಯಕ್ತಿಯನ್ನು ಹುಡುಕಾಡುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ