Latest
ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಇಬ್ಬರು ಮಕ್ಕಳೊಂದಿಗೆ ಪತಿ-ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿ ನಡೆದಿದೆ.
3-4 ದಿನಗಳಿಂದ ಮನೆಯಿಂದ ಯಾರೂ ಹೊರ ಬಾರದ್ದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಹೋಗಿ ನೋಡಿದಾಗ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಾಗೇಶ್ ಶಿರಗುಪ್ಪಿ (30) ವಿಜಯಲಕ್ಷ್ಮಿ (26) ಹಾಗೂ ಮಕ್ಕಳಾದ ಸಪ್ನಾ, ಶಮಂತ್ ಮೃತರು. ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮತ್ತೋರ್ವ ಒಮಿಕ್ರಾನ್ ಸೋಂಕಿತ ನಾಪತ್ತೆ




