ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ತಂದೆ-ಮಗ ಇಬ್ಬರು ಸೇರಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
44 ವರ್ಷದ ವಿನಾಯಕ ಕಾಮತ್ ಕೊಲೆಯಾದ ವ್ಯಕ್ತಿ. ಸಿಮೆಂಟ್ ಹಾಕಿದ ರಸ್ತೆಯಲ್ಲಿ ಕಾರು ಚಲಾಯಿಸಿದ್ದಕ್ಕೆ ಗಲಾಟೆ ಆರಂಭವಾಗಿದ್ದು, ಅಪಾರ್ಟ್ ಮೆಂಟ್ ನಿವಾಸಿಗಳಾದ ಕೃಷ್ಣಾನಂದ ಹಾಗೂ ಅವರ ಪುತ್ರ ಅವಿನಾಶ್ ಕಿಣಿ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ವಿನಾಯಕ ಕಾಮತ್ ಮೇಲೆ ಹಲ್ಲೆ ನಡೆಸಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ.
ಆರೋಪಿಗಳ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಂಗಳೂರು ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್ ಕೊಟ್ಟ ಸಿಎಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ