ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಕೆ.ಎಸ್.ರಾವ್.ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ನಿರಂತರವಾಗಿ ವೇಶ್ಯಾವಾಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಕುರಿತು ಮಾಹಿತಿ ಪಡೆದ ಪೊಲೀಸರ ತಂಡ ದಾಳಿ ನಡೆಸಿತ್ತು. ದಂಧೆ ನಡೆಸುತ್ತಿದ್ದವರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ