Latest

ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಹೋದ ಯುವತಿಯನ್ನು ಮನಬಂದಂತೆ ಥಳಿಸಿದ ಮಹಿಳಾ ಪಿಸಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ದೂರು ನೀಡಲೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವತಿಗೆ ಮಹಿಳಾ ಪೊಲೀಸ್ ಪೇದೆಯೊಬ್ಬರು ಲಾಠಿಯಿಂದ ಥಳಿಸಿರುವ ಆರೋಪ ಕೇಳಿಬಂದಿದ್ದು, ಮಹಿಳಾ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದಾನೆ ಎಂದು 16ವರ್ಷದ ಯುವತಿ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ವೇಳೆ ಮಹಿಳಾ ಪೊಲೀಸ್ ಪೇದೆಯೊಬ್ಬರು ಲಾಠಿಯಿಂದ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಮಹಿಳಾ ಪೊಲೀಸ್ ಸಿಬ್ಬಂದಿ ವಿರುದ್ಧ ಯುವತಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Home add -Advt

ಇದೀಗ ಮಹಿಳಾ ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಯುವತಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

Related Articles

Back to top button