
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಔಷಧವೆಂದು ಭಾವಿಸಿ ಕ್ರಿಮಿನಾಷಕ ಸೇವಿಸಿ ಗ್ರಾಮ ಪಂಚಾಯಿತಿ ಅಭ್ಯರ್ಥಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳದ ಕಾವಳಮುಡೂರಿನ ಅರ್ಗತ್ಯಾರು ನಿವಾಸಿ ಜಯಂತ ಪ್ರಭು ಮೃತ ದುರ್ದೈವಿ. ಬಾಯಿಹುಣ್ಣಿಗೆ ಸೇವಿಸುವ ಔಷಧವೆಂದು ತಿಳಿದು ಕ್ರಿಮಿನಾಶಕ ಸೇವಿಸಿ ಜಯಂತ ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ