ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆಯ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಪೋಷಕರೊಂದಿಗೆ ಠಾಣೆಗೆ ಬಂದಿದ್ದ ಬಾಲಕಿ ಮೊಬೈಲ್ ಸಂಖ್ಯೆ ಪಡೆದ ಹೆಡ್ ಕಾನ್ಸ್ ಟೇಬಲ್ ದರ್ಜೆಯ ಸಿಬ್ಬಂದಿ, ಬಳಿಕ ಆಕೆಗೆ ಕರೆ ಮಾಡುವುದು, ಅನುಚಿತ ಸಂದೇಶ ರವಾನೆ ಮಾಡಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ; ಆರೋಪಿಗಳ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ನೂತನ ಮುಖ್ಯಮಂತ್ರಿಯಿಂದ ಮಹತ್ವದ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ