Kannada NewsKarnataka NewsLatest

ಯಡಿಯೂರಪ್ಪ ನಗರ ಪ್ರದಕ್ಷಿಣೆ ಆರಂಭ

ಯಡಿಯೂರಪ್ಪ ನಗರ ಪ್ರದಕ್ಷಿಣೆ ಆರಂಭ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ಪ್ರವಾಹ ಪರಿಸ್ಥಿತಿ ಅವಲೋಕನಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ಆಗಮಿಸಿದ್ದು, ನಗರ ಪ್ರದಕ್ಷಿಣೆ ಆರಂಭಿಸಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಿಎಂ, ಅಧಿಕಾರಿಗಳಿಂದ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಹಾಗೂ ಇತರ ಅಧಿಕಾರಿಗಳು ಮಾಹಿತಿ ನೀಡಿದರು. ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಕೂಡ ಹಾಜರಿದ್ದರು.

Home add -Advt

ನಂತರ ಅಲ್ಲಿಂದ ಯಡಿಯೂರಪ್ಪ ನಗರದ ವಿವಿಧೆಡೆ ಸಂಚರಿಸಿ ಪ್ರವಾಹ ಪರಿಸ್ಥಿತಿಯ ಖುದ್ದು ಅವಲೋಖನ ನಡೆಸಲಿದ್ದಾರೆ.

ಇಂದು ರಾತ್ರಿ ನಗರದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಿ ನಾಳೆ ಜಿಲ್ಲೆಯ ವಿವಿಧೆಡೆ ತೆರಳಿ ಪ್ರವಾಹ ಪರಿಸ್ಥಿತಿ ಪರಿಶೀಲಿಸುವರು. ಹವಾಮಾನ ಪರಿಸ್ಥಿತಿ ನೋಡಿಕೊಂಡು ವೈಮಾನಿಕೆ ಸಮೀಕ್ಷೆ ನಡೆಸುವ ಕಾರ್ಯಕ್ರಮ ಕೂಡ ಇದೆ.

ಇದನ್ನೂ ಓದಿ – ಇಂದು ಸಂಜೆ ಬೆಳಗಾವಿಗೆ ಯಡಿಯೂರಪ್ಪ

Related Articles

Back to top button