Latest

ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರಿನ ನಂತೂರು ಸಿಗ್ನಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಸ್ಯಾಮ್ಯುಯಲ್ ಜೇಸುದಾಸ್ (67) ಹಾಗೂ ಅವರ ಮಗಳು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ನಂತೂರು ಸಿಗ್ನಲ್ ಬಳಿ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಲಾರಿ ಚಾಲಕನನ್ನು ಹಿಡಿದು ಮನಬಂದಂತೆ ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಕದ್ರಿ ಠಾಣಾ ಪೊಲೀಸರು ಲಾರಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ.

Home add -Advt

Related Articles

Back to top button