ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಯೋರ್ವರು ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೇರಳ ಮೂಲದ ಸಾಂಡ್ರಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಈ ಹಿಂದೆ ಕೂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಕಳೆದ ಒಂದು ವರ್ಷದಿಂದ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ.
ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸ್ಕಿಡ್ ಆಗಿ, ಪೋಸ್ಟ್ ಮಾರ್ಟಂನಲ್ಲಿ ಕೊಲೆ ರಹಸ್ಯ ಬಯಲು!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ