Latest

ಬರೋಬ್ಬರಿ 1,92,50,000 ರೂಪಾಯಿ ನಿಷೇಧಿತ ನೋಟುಗಳು ಪತ್ತೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: 1,92,50,000 ರೂಪಾಯಿ ನಿಷೇಧಿತ ನೋಟುಗಳನ್ನು ಸಾಗಾಟ ಮಾಡುತ್ತಿದ್ದ ಇನೋವಾ ಕಾರನ್ನು ಬರ್ಜೆ ಪೊಲೀಸರು ಮಂಗಳೂರಿನ ಲಾಲ್ ಬಾಗ್ ಬಳಿ ವಶಕ್ಕೆ ಪಡೆದಿದ್ದಾರೆ.

ಇಲ್ಲಿನ ಲಾಲ್ ಬಾಗ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಖದೀಮರು ಸಿಕ್ಕಿಬಿದ್ದಿದ್ದಾರೆ. ಹಳೆ ಅಮಾನ್ಯಗೊಂಡಿರುವ ನೋಟುಗಳನ್ನು ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡಿಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ಬಂಧಿತರು.

ಸರ್ಕಾರ ಹಾಗೂ ಸಾರ್ವಜನಿಕರಿಗೆ ವಂಚಿಸಿ ಹಣವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಪ್ರಧಾನಿ ಮೋದಿ ಕ್ಷಮೆಯಾಚಿಸಲಿ; ಹೆಚ್.ಡಿ.ಕೆ ಆಗ್ರಹ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button