Latest

ವೈದ್ಯರ ನಿರ್ಲಕ್ಷ್ಯ: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಚಿಕಿತ್ಸೆ ಸಿಗದೇ ಮಗು ಹೊಟ್ಟೆಯಲ್ಲೇ ಸಾವು

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕ್ವಾರಂಟೈನ್ ನಲ್ಲಿ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೇ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ದುಬೈನಿಂದ ಮೇ 12ರಂದು ಗರ್ಭಿಣಿ ಏರ್ ಲಿಫ್ಟ್ ಆಗಿದ್ದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಆಕೆಯನ್ನು ಹೊಟೇಲ್ ಕ್ವಾರಂಟೈನ್ ಲ್ಲಿಡಲಾಗಿತ್ತು. ಮರುದಿನ ನಡೆದ ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು.

ಗರ್ಭಿಣಿಯ ಆರೋಗ್ಯ ತಪಾಸಣೆ ವಿಚಾರದಲ್ಲಿ ವೈದ್ಯರು ನಿರ್ಲಕ್ಷ್ಯ ವಹಿಸಿದ್ದು, ವರದಿ ನೆಗೆಟಿವ್ ಬಂದರೂ ಗರ್ಭಿಣಿಗೆ ಹೋಂ ಕ್ವಾರಂಟೈನ್ ಗೆ ಅವಕಾಶ ನೀಡಿರಲಿಲ್ಲ. ಮಂಗಳೂರಿನ ಕೆಲ ಖಾಸಗಿ ಆಸ್ಪತ್ರೆ ವೈದ್ಯರು ಕೂಡ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ.

ಇದೂಗ ಮಗು ಹೊಟ್ಟೆಯಲ್ಲೇ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮುಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button