Karnataka NewsLatest

ಬೆಳಗಾವಿ ಜಿಲ್ಲೆಗೆ 146 ಕೋಟಿ ರೂ. ಯೋಜನೆಗೆ ಅನುಮೋದನೆ – ಲಕ್ಷ್ಮಣ ಸವದಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –   ಬೆಳಗಾವಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 146 ಕೋಟಿ ರೂಪಾಯಿಗಳ ಅಂದಾಜು ಮೊತ್ತಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಅಥಣಿ ಮತಕ್ಷೇತ್ರದಲ್ಲಿ ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ಶುವೈದ್ಯಕೀಯ ಮಹಾವಿದ್ಯಾಲಯದ ಮೂರನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಶ್ಯ ಇರುವ 36 ಕೋಟಿ ರೂಪಾಯಿಗಳ ಹೆಚ್ಚುವರಿ ಮೊತ್ತಕ್ಕೆ ಇಂದು ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು  ಅವರು ತಿಳಿಸಿದರು.

Home add -Advt

ಇದರ ಜೊತೆಯಲ್ಲಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ರೂ 110 ಕೋಟಿ ರೂಪಾಯಿಗಳ ಅಂದಾಜು ಮೊತ್ತದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಇದರಿಂದಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ಕೂಡಲೇ ಕೈಗೆತ್ತಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚುವರಿಯಾಗಿ ರೂ.36 ಕೋಟಿ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತ ಪಡಿಸಿದ್ದಾರೆ.

ಅಥಣಿಯಲ್ಲಿ ಕಾರ್ಯನಿವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು ಅಲ್ಲದೇ ವಿದ್ಯಾಲಯದ ಕಾಮಗಾರಿಗಳು ಸಹ ನಿಧಾನಗತಿಯಲ್ಲಿ ಆಗಿರುವುದರಿಂದ ಇಲ್ಲಿಯವರೆಗೆ ಪ್ರವೇಶಾತಿ ಆರಂಭವಾಗಿರಲಿಲ್ಲ. ಈ ಭಾಗದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಳೆದ ಅವಧಿಯಲ್ಲಿ ಘೋಷಣೆ ಮಾಡಿದ ಪಶುವೈದ್ಯಕೀಯ ಮಹಾವಿದ್ಯಾಲಯ ನಂತರದಲ್ಲಿ ಬಂದ ಸರ್ಕಾರಗಳು ಅನುದಾನ ನೀಡದಿರುವುದರಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಈ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರರೊಂದಿಗೆ ಗಂಭೀರವಾಗಿ ಚರ್ಚೆ ಸಹ ನಡೆಸಲಾಗಿತ್ತು.

ಮಹಾವಿದ್ಯಾಲದ ಪ್ರಥಮ ಹಾಗೂ ದ್ವಿತೀಯ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, MSVE (Minimum Standard of Veterinary Education Regulation 2016)ರ ಅನ್ವಯ ಬೇಕಾದ ಕನಿಷ್ಠ ಮೂಲಭೂತ ಸೌಕರ್ಯಗಳಾದ ಪ್ರಾಯೋಗಿಕ ಉಪಕರಣಗಳು, ಪಿಠೋಪಕರಣಗಳು ಹಾಗೂ ಇತರೇ ಸೌಕರ್ಯಗಳಿಗೆ ರೂ.೧೩೭ ಕೋಟಿ ಮೊತ್ತ ಬೇಕಿದ್ದು, ಅದರಲ್ಲಿ ಈಗಾಗಲೇ ರೂ.50 ಕೋಟಿ ಬಿಡುಗಡೆ ಮಾಡಲಾಗಿದ್ದು, ಪರಿಷ್ಕೃತ ಹೆಚ್ಚುವರಿ ರೂ.82 ಕೋಟಿಯಲ್ಲಿ ರೂ.೩೬ ಕೋಟಿ ಸದ್ಯ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಥಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಮುಂಬೈ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತು ಈ ಭಾಗದ ನಿರುದ್ಯೋಗಿ ಯುವಕರಿಗೆ ಮತ್ತು ಮಹಿಳೆಯರಿಗೆ ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ಉದ್ಯೋಗಾವಕಾಶ ಕಂಡುಕೊಳ್ಳಲು ಸಹಕಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಅಥಣಿಯಲ್ಲಿ 75 ಸಾವಿರಕ್ಕೂ ಹೆಚ್ಚು ಆಹಾರ ಧಾನ್ಯದ ಕಿಟ್ ವಿತರಿಸುತ್ತಿರುವ ಲಕ್ಷ್ಮಣ ಸವದಿ

Related Articles

Back to top button