ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಗೋಡೆ ಮೇಲೆ ಉಗ್ರರ ಪರ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೋರ್ವನನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೊಹಮ್ಮದ್ ನಜೀರ್ ಎಂದು ಗುರುತಿಸಲಾಗಿದೆ. ಈತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನೆಂದು ತಿಳಿದುಬಂದಿದೆ.
ಶಂಕಿತನ ಮೊಬೈಲ್ ಟವರ್ ಲೋಕೇಶನ್ ಆಧಾರದ ಮೇಲೆ ಮೊಹಮ್ಮದ್ ನಜೀರ್ ನನ್ನು ಬಂಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ