Latest

ಡೀಸೆಲ್ ಟ್ಯಾಂಕರ್-ಕಾರು ನಡುವೆ ಭೀಕರ ಅಪಘಾತ; ಐವರು ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ಆಗ್ರಾ: ಡೀಸೆಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಐವರು ಸಜೀವ ದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ.

ಲಖನೌದಿಂದ ಆಗ್ರಾಗೆ ತೆರಳುತ್ತಿದ್ದ ಕಾರು, ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ವೇಗವಾಗಿ ಚಲಿಸುತ್ತಿದ್ದ ಟ್ರಕ್ ಏಕಾಏಕಿ ರಾಂಗ್ ಟರ್ನ್ ತೆಗೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನ ಡೋರ್ ಲಾಕ್ ಆಗಿದ್ದ ಕಾರಣ ಹೊರಬರಲಾಗದೇ ಕಾರಿನಲ್ಲಿದ್ದ ಐವರು ಸಜೀವ ದಹನವಾಗಿದ್ದಾರೆ.

ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಐವರು ಸಾವನ್ನಪ್ಪಿದ್ದಾರೆ.

Home add -Advt

Related Articles

Back to top button