CrimeKannada NewsKarnataka NewsLatest

*ಪ್ರಾರ್ಥನೆಗೆ ಬರುತ್ತಿದ್ದ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ*: *ಚರ್ಚ್ ಪಾದ್ರಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಾಲಕರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪದಲ್ಲಿ ಚರ್ಚ್ ಪಾದ್ರಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಚರ್ಚ್ ಗೆ ಪ್ರಾರ್ಥನೆಗೆ ಬರುತ್ತಿದ್ದ ಬಾಲಕರಿಗೆ ಪಾದ್ರಿ ಲೈಂಗಿಕ ಕಿರುಕುಳ ನೀಡಿತ್ತಿದ್ದ ಬಗ್ಗೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಾಲಕರ ಪೋಷಕರು ನೀಡಿದ ದೂರುನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪಾದ್ರಿಯನ್ನು ಬಂಧಿಸಿದ್ದಾರೆ.

ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಫಾದರ್ ಸಿಪ್ರಿಯನ್ ಪಿಂಟೋ ಬಂಧಿತ ಆರೋಪಿ. ಈತ ಪ್ರಾರ್ಥನೆಗೆ ಹೋದ ಸಂದರ್ಭದಲ್ಲಿ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಇಬ್ಬರು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದು, ಬಳಿಕ ಪೋಷಕರು ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪೊಲೀಸರು, ಸಿಪ್ರಿಯನ್ ಪಿಂಟೋನನ್ನು ಬಂಧಿಸಿದ್ದಾರೆ.

ಪ್ರಾರ್ಥನೆಗೆ ಹೋದ ಸಂದರ್ಭದಲ್ಲಿ ಬಾಲಕನಿಗೆ ‘Sweet boy I Love You’ ಅಂತಾ ಪುಸಲಾಯಿಸಿ ಪಾದ್ರಿ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕರು ಈ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನ್ನ ವಿರುದ್ಧ ಪೊಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಪಾದ್ರಿ ತಲೆಮರೆಸಿಕೊಂಡಿದ್ದ. ಹಾಸನ ಜಿಲ್ಲೆಯ ಸಕಲೇಶಪುರದ ಸಂಬಂಧಿ ಮನೆಯಲ್ಲಿ ಅಡಗಿದ್ದ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button