
ಪ್ರಗತಿವಾಹಿನಿ ಸುದ್ದಿ: ಹಿಂದೂ ಪರ ಸಂಘಟನೆಯ ಮುಖಂಡರೊಬ್ಬರ ಮೊಬೈಲ್ ನಲ್ಲಿ ರಾಜಕಾರಣಿಗಳು ಸೇರಿದಂತೆ ಹಲವರ ಅಶ್ಲೀಲ ವಿಡಿಯೋ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಪ್ರಕರಣವೊಂದರಲ್ಲಿ ಬಂಧಿಸಿ ವಿಚಾರಣೆ ವೇಳೆ ಮೊಬೈಲ್ ಪರಿಶೀಲಿಸಿದಾಗ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಆರೋಪಿ ಮೊಬೈಲ್ ನಲ್ಲಿ ರಾಜಕಾರಣಿಗಳು ಸೇರಿದಂತೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಎಂಬುವವರ ಮೊಬೈಲ್ ನಲ್ಲಿ ಹಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಅದರಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಕೂಡ ಇದೆ. ಈ ಬಗ್ಗೆ ಮೂಡಬಿದರೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಅಪಘಾತವೆಸಗಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಗೊಳಿಸಿದ್ದ ಪ್ರಕರಣದಲ್ಲಿ ಹಿಂದೂ ಮುಖಂಡ ಸಮಿತ್ ರಾಜ್ ನನ್ನು ಇತ್ತೀಚೆಗೆ ಮೂಡಬಿದರೆ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈ ಬಗ್ಗೆ ಇನ್ಸ್ ಪೆಕ್ಟರ್ ಸಂದೇಶ್ ದೂರು ನೀಡಿದ್ದು, ಮೂಡಬಿದರೆ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.