ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳ ದಿಢೀರ್ ದಾಳಿ

ಡ್ರಗ್ಸ್, ಗಂಜಾ ಪತ್ತೆ ಪ್ರಗತಿವಾಹಿನಿ ಸುದ್ದಿ: ಮಂಗಳೂರು ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳು ಬೆಳಿಗ್ಗೆ ಯೇ ದಾಲಿ ನಡೆಸಿದ್ದು, ಅಪಾರ ಪ್ರಮಾಣದ ಗಾಂಜಾ, ಡ್ರಗ್ಸ್, ಹಲವು ವಸ್ತುಗಳು ಪತ್ತೆಯಾಗಿವೆ. ಮಂಗಳೂರಿನ ಕೋಡಿಯಾಲ್ ಬೈಲ್ ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಈ ವೇಳೆ ಗಾಂಜಾ, ಡ್ರಗ್ಸ್, 25 ಮೊಬೈಲ್ ಫೋನ್ ಗಳು, ಒಂದು ಬ್ಲೂಟೂತ್, ಕತ್ತರಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. 150ಕ್ಕೂ ಹೆಚ್ಚು ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಎಲ್ಲಾ ವಸ್ತುಗಳನ್ನು … Continue reading ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳ ದಿಢೀರ್ ದಾಳಿ