Kannada NewsKarnataka NewsLatestPolitics

*ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಕೇಸ್; ಇನ್ನಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಣ ಕನ್ನಡ ಜಿಲ್ಲೆಯ ಕಡಬ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಾರ್ಚ್ 5ರಂದು ಕಡಬ ಸರ್ಕಾರಿ ಕಾಲೇಜಿನ ಆವರಡಲ್ಲಿ ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಆಸಿಡ್ ದಾಳಿ ನಡೆಸಿದ್ದ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

Home add -Advt

ತನಿಖೆ ಮುಂದುವರೆಸಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ಕೇರಳ ಮೂಲದ ಮತ್ತಿಬರು ಆರೋಪಿಗಳನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗೆ ಆಸಿಡ್ ತಂದುಕೊಟ್ಟಿದ್ದ ವ್ಯಕ್ತಿ ಹಾಗೂ ಆಸಿಡ್ ದಾಳಿ ನಡೆದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಬಟ್ಟೆಯನ್ನು ಹೊಲಿದು ಆರೋಪಿಗೆ ಕೊಟ್ಟ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಆಸಿಡ್ ನ್ನು ಆಲ್ ಲೈನ್ ನಲ್ಲಿ ಖರೀದಿಸಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ಆಸಿಡ್ ದಾಳಿಯಲ್ಲಿ ಗಂಭಿರವಾಗಿ ಗಾಯಗೊಂಡಿರುವ ಮೂವರು ವಿದ್ಯಾರ್ಥಿನಿಯರಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.


Related Articles

Back to top button