ಪ್ರಗತಿವಾಹಿನಿ ಸುದ್ದಿ: ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಮಂಗಳೂರು ನಗರದ ಬಲ್ಮಠದಲ್ಲಿ ನಡೆದಿದೆ.
ಕಟ್ಟಡ ನಿರ್ಮಾಣ ವೇಳೆ ಇದ್ದಕ್ಕಿದ್ದಂತೆ ಮಣ್ಣು ಕುಸಿದಿದೆ. ಕೂಲಿ ಕಾರ್ಮಿಕರಿಬ್ಬರು ಮಣ್ಣಿನಡಿ ಸಿಲುಕಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ಸದ್ಯದ ಮಾಹಿತಿ ಪ್ರಕಾರ ಓರ್ವ ಕಾರ್ಮಿಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವನ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ