
ಪ್ರಗತಿವಾಹಿನಿ ಸುದ್ದಿ: ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ ಲಿಮಿಟೆಡ್ (MRPL) ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಸೊಹೋಟದ ಬೆನ್ನಲ್ಲೇ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮುಗಿಲೆತ್ತರಕ್ಕೆ ಹೊತ್ತಿ ಉರಿಯುತ್ತಿದೆ.
ಮಂಗಳೂರಿನ ಜೋಕಟ್ಟೆ ಬಳಿ ಇರುವ ಎಂಆರ್‌ಪಿಎಲ್ ಘಟಕದಲ್ಲಿ ಈ ಘಟನೆ ನಡೆದಿದ್ದು, ಎಂಆರ್‌ಪಿಎಲ್ ಘಟಕದಲ್ಲಿಯೇ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದೆ. ಅಲ್ಲದೇ ದೊಡ್ಡ ಅನಾಅಹುತ ಸಂಭವಿಸಿರುವ ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆಂಬುಲೆನ್ಸ್ ಗಳು ದೌಡಾಯಿಸಿವೆ. ಘಟನಾ ಸ್ಥಳದ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಯಾರನ್ನೂ ಒಳಗೆ ಬಿಡುತ್ತಿಲ್ಲ.
ಎಂಆರ್ ಪಿಎಲ್ ನಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವ ಹಾಗೂ ಸುತ್ತ ಮುತ್ತ ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯ ಕಂಡುಬರುತ್ತಿದೆ. ಸ್ಥಳೀಯರ ಮಾಹಿತಿ ಪ್ರಕಾರ ಸ್ಫೋಟದ ರಭಸಕ್ಕೆ ಅಂಗನವಾಡಿ, ಗ್ರಾಮ ಪಂಚಾಯತಿ ಕಚೇರಿ ಹಾಗೂ ಮನೆಗಳ ಕಿಟಕಿ ಗಾಜುಗಳು ಒಡೆದು ಹೋಗಿವೆ. ದಟ್ಟ ಹೊಗೆ ಜನರನ್ನು ಆತಂಕಕ್ಕೀಡು ಮಾಡುತ್ತಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



