Karnataka News

*ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು: ರೆಸಾರ್ಟ್ ಸೀಲ್ ಡೌನ್*

ಪ್ರಗತಿವಾಹಿನಿ ಸುದ್ದಿ: ಮಂಗಳೂರು ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Home add -Advt

ಮೈಸೂರು ಮೂಲದ ನಿತಿಶಾ ಎಂಡಿ, ಪಾರ್ವತಿ ಎಸ್, ಕೀರ್ತನಾ ಎಸ್ ಎಂಬ ಮೂವರು ಯುವತಿಯರು ಮಂಗಳೂರಿನ ಉಳ್ಳಾಲ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದರು. ಮೂವರಿಗೂ ಈಜು ಬರುತ್ತಿರಲಿಲ್ಲ. ಆದಾಗ್ಯೂ ಈಜಲು ಹೋಗಿ ದುರಂತಕ್ಕೀಡಾಗಿದ್ದಾರೆ. ಈಜುಕೊಳದ ಬಳಿ ರೆಸಾರ್ಟ್ ಸಿಬ್ಬಂದಿಯಾಗಲಿ, ಮುನ್ನೆಚ್ಚರಿಕಾ ಕ್ರಮವಾಗಿ ಸುರಕ್ಷತಾ ಕ್ರಮ ಕೈಗೊಳ್ಳದಿರುವುದು ಕೂಡ ದುರಂತ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕ ಮನೋಹರ್ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರನದ ತನಿಖೆ ಮುಗಿಯುವವರೆಗೂ ರೆಸಾರ್ಟ್ ಲೈಸನ್ಸ್ ರದ್ದು ಮಾಡಿ, ತಾತ್ಕಾಲಿಕವಾಗಿ ರೆಸಾರ್ಟ್ ಸೀಲ್ ಡೌನ್ ಮಾಡಲಾಗಿದೆ.

Related Articles

Back to top button