Kannada NewsKarnataka NewsLatest

*BREAKING: ಸಮಾರಂಭದ ವೇಳೆ ಕುಸಿದು ಬಿದ್ದ ಬಾಲ್ಕನಿ ತಡೆಗೋಡೆ: ವಿದ್ಯಾರ್ಥಿ ಸಾವು*

ಪ್ರಗತಿವಾಹಿನಿ ಸುದ್ದಿ: ಪದಗ್ರಹಣ ಸಮಾರಂಭದಲ್ಲಿ ಕನ್ವೆನ್ ಶನ್ ಹಾಲ್ ನ ಬಾಲ್ಕನಿಯ ತಡೆ ಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮಂಗಳೂರಿನ ಪಾಂಡವೇಶ್ವರದಲ್ಲಿ ಈ ದುರಂತ ಸಂಭವಿಸಿದೆ. ಮೊಹಮ್ಮದ್ ಶಮಾಜ್ (16) ಮೃತ ವಿದ್ಯಾರ್ಥಿ. ಮಂಗಳೂರಿನ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಯಾಗಿದ್ದು, ನಿನ್ನೆ ರಾಮ ಲಕ್ಷ್ಮಣ ಕನ್ವೆನ್ಶನ್ ಹಾಲ್ ನಲ್ಲಿ ಸರ್ವ ಕಾಲೇಜು ಚುನಾವಣೆ ಹಾಗೂ ಪದಗ್ರಹಣ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ಸಂಭ್ರಮಾಚರಣೆ ವೇಳೆ ಕಟ್ಟಡದ ಬಾಲ್ಕನಿಯ ತಡೆಗೋಡೆ ವಿದ್ಯಾರ್ಥಿಗಳ ಮೇಲೆ ಕುಸಿದು ಬಿದ್ದಿದೆ.

ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಶಮಾಜ್ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ.

ಉಳಿದ ಗಾಯಾಳು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪಾಂಡವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಕರಣ ಸಂಬಂಧ ಮೃತ ವಿದ್ಯಾರ್ಥಿಯ ತಂದೆ ಕಾರ್ಯಕ್ರಮದ ಆಯೋಜಕರು ಹಾಗೂ ಕಟ್ಟಡ ಮಾಲೀಕರ ವಿರುಧ ದೂರು ನೀಡಿದ್ದಾರೆ. ಪಾಂಡವೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button