
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್ ನನ್ನು ಕಲಬುರಗಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಕೊಲೆಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ಕಲಬುರಗಿಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಮಣಿಕಂಠ ರಾಠೋಡ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ರಾಠೋಡ್ ಹೈಡ್ರಾಮಾ ಮಾಡಿದ್ದ. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ಮೇಲೆ ಕಲ್ಲೇಟು ಬಿದ್ದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಕೊಲೆ ಯತ್ನ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಣಿಕಂಠ ರಾಥೋಡ್ ಬಂಧನವಾಗಿದೆ.




