![](https://pragativahini.com/wp-content/uploads/2025/02/biren.jpg)
ಪ್ರಗತಿವಾಹಿನಿ ಸುದ್ದಿ: ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಬಳಿಕ ಈಶಾನ್ಯ ರಾಜ್ಯ ಮಣಿಪುರ ಸಿಎಂ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ ನೀಡಿದ್ದಾರೆ.
ತಮ್ಮ ನಾಯಕತ್ವದ ವಿರುದ್ಧ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಬಗೆಹರಿಸಲು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ.
ಮಣಿಪುರ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ. ಕಳೆದ ಎರಡು ವರ್ಷಗಳಿಂದ ಜನಾಂಗೀಯ ಹಿಂಸಾಚಾರ ಸಂಭವಿಸುತ್ತಿದ್ದು, ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದೇ ರಾಜೀನಾಮೆ ನೀಡಿರಬಹುದು ಎಂದು ಹೇಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ