ಪ್ರಗತಿವಾಹಿನಿ ಸುದ್ದಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿದ್ದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ಮಂಜೂರಾಗಿದೆ.
ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಪಾಸ್ ಪೋರ್ಟ್ ಒಪ್ಪಿಸುವಂತೆ ಸೂಚಿಸಿದೆ. 2 ಲಕ್ಷ ರೂ ಬಾಂಡ್, ಇಬ್ಬರ ಶ್ಯುರಿಟಿ, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಸೇರಿದಂತೆ ಹಲವು ಷರತ್ತು ವಿಧಿಸಲಾಗಿದೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮನೀಶ್ ಸಿಸೋಡಿಯಾ ಅವರನ್ನು ಮೊದಲಿ ಸಿಬಿಐ ಹಾಗೂ ಬಳಿಕ ಇಡಿ ಬಂಧಿಸಿತ್ತು. ಇದೀಗ ಎರಡೂ ಪ್ರಕರಣದಲ್ಲಿಯೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, 17 ತಿಂಗಳ ಬಳಿಕ ಸಿಸೋಡಿಯಾ ಬಿಡುಗಡೆಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ