Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಧಾರವಾಡ, ಬೆಂಗಳೂರು ಗ್ರಾಮಾಂತರ, ಹಾವೇರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Related Articles

Back to top button