ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಚಿತಾಭಸ್ಮವನ್ನು ಗುರುದ್ವಾರದ ಬಳಿಯ ಯಮುನಾ ನದಿಯಲ್ಲಿ ಇಂದು ವಿಸರ್ಜನೆ ಮಾಡಲಾಯಿತು.
92 ವರ್ಷ ವಯಸ್ಸಿನ ಡಾ ಸಿಂಗ್ ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ರಾತ್ರಿ ನಿಧನರಾಗಿದ್ದರು. ನಿನ್ನೆ ದೆಹಲಿಯ ನಿಗಮ್ ಬೋದ್ ನಲ್ಲಿ ಸಿಖ್ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರಿದ್ದು ಪಂಚಭೂತಗಳಲ್ಲಿ ಮನಮೋಹನ್ ಸಿಂಗ್ ಲೀನರಾಗಿದ್ದಾರೆ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಮುಂದೆ ಸುಮಾರು 30 ನಿಮಿಷಗಳ ಕಾಲ ಮಂತ್ರ ಪಠಣೆ ಮಾಡಲಾಯಿತು.
ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ