ಪ್ರಗತಿವಾಹಿನಿ ಸುದ್ದಿ: ರೈತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕುತ್ತಿದ್ದ ಟ್ರೇನಿ ಐಎ ಎಸ್ ಅಧಿಕಾರಿಯೊಬ್ಬರ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.
ತರಬೇತಿ ಪಡೆಯುತ್ತಿರುವ ಐಎ ಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಖೇಡ್ಕರ್ ಮಹಾರಾಷ್ಟ್ರದ ಪುಣೆಯಲ್ಲಿ ರೈತರಿಗೆ ಪಿಸ್ತೂಲ್ ಹಿಡಿದು ಬೆದರಿಕೆ ಹಾಕುತ್ತಿದ್ದ ವಿಡಿಯೋ ವೈರಲ್ ಆಗಿತ್ತು.
ಭಾರತೀಯ ನ್ಯಾಯ ಸಂಹಿತಾ ಹಾಗೂ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ರೈತರಿಬ್ಬರು ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ದಾಖಲಾಗಿತ್ತು. ಇದೀಗ ಮನೋರಮಾ ಖೇಡ್ಕರ್ ಅವರನ್ನು ರಾಯಘಢದ ಹೋಟೆಲ್ ಒಂದರಲ್ಲಿ ಬಂಧಿಸಲಾಗಿದೆ.
ಪುಣೆಯ ಮುಲ್ಕಿ ತಹಶೀಲ್ ನಲ್ಲಿ ಖೇಡ್ಕರ್ ಕುಟುಂಬ 25 ಎಕರೆ ಜಮೀನು ಖರೀದಿಸಿತ್ತು. ಅಲ್ಲದೇ ಅಕ್ಕಪಕ್ಕದ ರೈತರ ಜಮೀನನ್ನೂ ಒತ್ತುವರಿ ಮಾಡಿಕೊಂಡಿತ್ತು. ಇದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾಗ ಪೂಜಾ ಖೇಡ್ಕರ್ ತಾಯಿ ಮನೋರಮಾ ಬೌನ್ಸರ್ ಗಳ ಸಮೇತ ಸ್ಥಳಕ್ಕೆ ಧಾವಿಸಿ ರೈತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ