Kannada NewsKarnataka NewsLatest

*ಮತ್ತೊಂದು ಘೋರ ಘಟನೆ: ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದಲ್ಲಿ ನಡೆದಿದೆ.

Home add -Advt

36 ವರ್ಷದ ಕೃಷ್ಣ ಕೊಲೆಯಾಗಿರುವ ದುರ್ದೈವಿ. ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ಕೃಷ್ಣ ಅವರ ಮೇಲೆ ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕೃಷ್ಣ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮಣಿಪಾಲದಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.


Related Articles

Back to top button