Karnataka News

*ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ಏಕಾಏಕಿ ತನ್ನ ತಲೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಧು ಅಲಿಯಾಸ್ ಅಶೋಕ್ ಮೃತ ವ್ಯಕ್ತಿ. ಅತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಧು ಅವರ ಮೂರು ವರ್ಷದ ಮಗಳಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಪತ್ನಿ ಮಗಳನ್ನು ಕರೆದುಕೊಂಡು ಬೆಂಗಳೂರಿಗೆ ಬಂದಿದ್ದರು. ವಾರದ ಹಿಂದೆ ಪತ್ನಿ-ಮಗಳು ಬೆಂಗಳೂರಿನಲ್ಲಿ ಚಿಕಿತ್ಸೆಗಾಗಿ ಬಂದಿದ್ದರು. ಭಾನುವಾರ ಮಧು ತಾಯಿ ಕೂಡ ಬೆಂಗಳೂಗೆ ಬಂದಿದ್ದಾರೆ. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಮಧು ಕಂಠ ಪೂರ್ತಿ ಮದ್ಯ ಸೇವಿಸಿ ಬಳಿಕ ಡಬಲ್ ಬ್ಯಾರಲ್ ಬಂದೂಕಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button