Karnataka News

*ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಲಗಾರರ ಕಾಟಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮದ ಪ್ರಶಾಂತ್ (32) ಆತ್ಮಹತ್ಯೆ ಮಾಡಿಕೊಂಡವರು. ಸಾಲಗಾರರ ಕಾಟಕ್ಕೆ ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related Articles

ವರ್ಷದ ಹಿಂದಷ್ಟೇ ಪ್ರಶಾಂತ್ ಪತ್ನಿಗೂ ವಿಚ್ಛೇದನ ನೀಡಿದ್ದರಂತೆ. ಈ ಬಗ್ಗೆ ಪತ್ನಿ ಕುಟುಂಬದವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಈಗ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Home add -Advt

Related Articles

Back to top button