Kannada NewsKarnataka NewsLatest
*ಷೇರುಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಷ್ಟ: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಭಾರಿ ನಷ್ಟ ಅನುಭವಿಸಿದ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಬೆಂಗಳೂರಿನ ಹೆಬ್ಬಾಳ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಗಾರರ ಕಾಟಕ್ಕೆ ಬೇಸತ್ತು ವೆಂಕಟೇಶ್ (50) ಸಾವಿಗೆ ಶರಣಾಗಿದ್ದಾರೆ.
ಸಾಲ ಮಾಡಿ ಷೇಋ ಮಾರುಕಟ್ತೆಯಲ್ಲಿ ಹಣ ಹೂಡಿಕೆ ಮಾಅಡಿದ್ದರಂತೆ. ಆದರೆ ಭಾರಿಇ ನಷ್ಟ ಅನುಭವಿಸಿದ್ದರಂತೆ. ಜೊತೆಗೆ ಅನಾರೋಗ್ಯ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



