
ಪ್ರಗತಿವಾಹಿನಿ ಸುದ್ದಿ: ಪತ್ನಿ ಸಾವಿನಿಂದ ಮನನೊಂದ ಪತಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ಎಸ್ ಪಿಎಸ್ ನಗರದಲ್ಲಿ ನಡೆದಿದೆ.
ಮಕ್ಕಳಾದ ಸಿಂಧುಶ್ರೀ (4), ತ್ರಿಜಯ್ (3) ನನ್ನು ಹತ್ಯೆಗೈದು ತಂದೆ ಉದಯ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೂರು ತಿಂಗಳ ಹಿಂದೆ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಪತ್ನಿ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಉದಯ್, ಖಿನ್ನತೆ ಒಳಗಾಗಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.