
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಮೇಯಲು ಬಿಟ್ಟಿದ್ದ ಕುದುರೆಬಾಯಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲ್ ಪುರ ತಾಲೂಕಿನ ಗೊಗ್ಗುರು ಗ್ರಾಮದಲ್ಲಿ ನಡೆದಿದೆ.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಾಣಿಪ್ರಿಯರು ಆಗ್ರಹಿಸಿದ್ದಾರೆ.
ಕುದುರೆ ತನ್ನ ಪಾಡಿಗೆ ಹುಲ್ಲು ಮೇಯುತ್ತಿದ್ದ ವೇಳೆ ಕಿಡಿಗೇಡಿಗಳು ಅದರ ಬಾಯಿಗೆ ಬೆಂಕಿ ಹಚ್ಚಿ ಸಂಭ್ರಮಿಸಿದ್ದಾರೆ ಎನ್ನಲಾಗಿದೆ.