Belagavi NewsBelgaum NewsKannada NewsKarnataka News

*ಎಂಎಲ್ಸಿ ಕ್ಷೇತ್ರ ಅಭಿವೃದ್ಧಿ ನಿಧಿಯಿಂದ ರಾಯಬಾಗ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ:* *ಶಂಕುಸ್ಥಾಪನೆ ನೆರವೇರಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ:  ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ರಾಯಬಾಗ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಸುಮಾರು 61 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಸೋಮವಾರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

 ಸುಮಾರು 61 ಲಕ್ಷ ರೂ.ಗಳ ವೆಚ್ಚದಲ್ಲಿ  ಒಟ್ಟೂ 9 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾಮೂಹಿಕವಾಗಿ ಚಾಲನೆ ನೀಡಲಾಯಿತು. ವಿಧಾನ ಪರಿಷತ್ ಸದಸ್ಯರಿಗೆ ಅನುದಾನ ಕಡಿಮೆ ಇದ್ದರೂ ಇರುವ ಅನುದಾನವನ್ನು ಅತ್ಯಂತ ಸಮರ್ಪಕವಾಗಿ ಬಳಸಲಾಗುತ್ತಿದೆ. ಜೊತೆಗೆ ಎಲ್ಲ ಶಾಸಕರ ಸಹಕಾರದೊಂದಿಗೆ ಸರಕಾರದ ಬೇರೆ ಬೇರೆ ಇಲಾಖೆಗಳ ಅನುದಾನಗಳನ್ನು ಸಹ ಬಳಸಿ ಜಿಲ್ಲೆಯಲ್ಲಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ ಎರಡೂವರೆ ವರ್ಷದಲ್ಲಿ ಕಾಂಗ್ರೆಸ್ ಸರಕಾರದಿಂದ ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು. 

ಇದೇ ವೇಳೆ, ಚಿಕ್ಕೊಡಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಯಬಾಗ ವಿಧಾನಸಭಾ ಮತಕ್ಷೇತ್ರದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಚಿಕ್ಕೊಡಿ ಕಾರ್ಯಾಲಯದ ಉದ್ಘಾಟನೆಯನ್ನು ಸಹ ನಡೆಸಲಾಯಿತು. 

 ಈ ವೇಳೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಬೆಳಘಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಮಹಾವೀರ ಮೋಹಿತೆ, ರಾಜೇಶ ಕದಂ, ಪುಟ್ಟು ಪಾಟೀಲ, ಚಿಕ್ಕೊಡಿ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

Related Articles

Back to top button