ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸೋಮವಾರ ಬೆಳಗಾವಿಗೆ ಗಣ್ಯರ ದಂಡೇ ಹರಿದು ಬರಲಿದೆ.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಇಬ್ಬರು ಪುತ್ರರ ವಿವಾಹ ಸಮಾರಂಭ ಸೋಮವಾರ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಬೊಮ್ಮಾಯಿ 12.15ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುವರು. ಅಲ್ಲಿಂದ ಸಿಪಿಎಡ್ ಮೈದಾನಕ್ಕೆ ಆಗಮಿಸಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು 2 ಗಂಟೆಗೆ ವಾಪಸ್ ಬೆಂಗಳೂರಿಗೆ ತೆರಳುವರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಲವಾರು ಕೇಂದ್ರ ಹಾಗೂ ರಾಜ್ಯದ ಸಚಿವರು, ಬಿಜೆಪಿಯ ನಾಯಕರು ವಿವಾಹ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ, ಬಿ.ಸಿ.ನಾಗೇಶ, ಭೈರತಿ ಬಸವರಾಜ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮತ್ತು ಭಗವಂತ ಖೂಬಾ ಸೇರಿದಂತೆ ಕೆಲವು ಕೇಂದ್ರ ಸಚಿವರು ಬರುವುದು ಖಚಿತವಾಗಿದೆ.
ರಮೇಶ ಜಾರಕಿಹೊಳಿಗೆ `ಯಾರೋ ಒಬ್ಬ ವ್ಯಕ್ತಿ’ ಎಂದ ಗೋವಿಂದ ಕಾರಜೋಳ!
https://pragati.taskdun.com/govinda-karajolas-response-to-ramesh-jarakiholis-statement/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ