Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ: ರಾಜ್ಯದ 29 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಮುಂದಿನ ಒಂದು ವಾರಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 9ರವರೆಗೆ ಮರೆಳೆಯಾಗಲಿದೆ. ಕರ್ನಾಟದ 29 ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆಯಾಗಲಿದೆ. ಈ ಹಿನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಉತ್ತರ ಕನ್ನಡ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.


Related Articles

Back to top button