
ಪ್ರಗತಿವಾಹಿನಿ ಸುದ್ದಿ, ಕೊಲ್ಲಾಪುರ: ‘ತುಝ್ಯಾತ್ ಜೀವ್ ರಂಗಲಾ’ ಖ್ಯಾತಿಯ ಮರಾಠಿ ಕಿರುತೆರೆ ನಟಿ ಕಲ್ಯಾಣಿ ಕುರಾಳೆ- ಜಾಧವ (32) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸಾಂಗ್ಲಿ- ಕೊಲ್ಲಾಪುರ ಹೆದ್ದಾರಿಯ ಹಾಲೊಂಡಿ ಕ್ರಾಸ್ ಬಳಿ ಈ ಅವಘಡ ಸಂಭವಿಸಿದೆ. ಕಲ್ಯಾಣಿ ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದರು ಎಂದು ಕೊಲ್ಲಾಪುರ ಪೊಲೀಸರು ತಿಳಿಸಿದ್ದಾರೆ.
ಅಪಘಾತಪಡಿಸಿದ ವಾಹನ ಚಾಲಕನ ವಿರುದ್ಧ ಶಿರೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತನನ್ನು ಬಂಧಿಸಲಾಗಿದೆ.
ಕಲ್ಯಾಣಿ ಅವರು ಕಿರುತೆರೆಯಲ್ಲಿ ತಮ್ಮ ಅಭಿನಯದ ಮೂಲಕ ವೀಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ‘ಧಕ್ಕಾಂಚಾ ರಾಜಾ’ ‘ಜ್ಯೋತಿಬಾ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ಅಭಿನಯಿಸಿದ್ದರು.
ಕೊಲ್ಲಾಪುರದಲ್ಲೇ ಹುಟ್ಟಿ ಬೆಳೆದಿದ್ದ ಅವರು ನಟಿಯಾಗಿ ಜೀವನ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪುಣೆಗೆ ಹೋಗಿ ನೆಲೆಸಿದ್ದರು. ಆದರೆ ಕೋವಿಡ್ ನಂತರ ಪುನಃ ಪುಣೆಗೆ ಆಗಮಿಸಿ ತಮ್ಮ ರೆಸ್ಟೋರಂಟ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದರು.
ಭರವಸೆಯ ಯುವ ನಟಿಯ ಸಾವಿಗೆ ಮರಾಠಿ ಚಿತ್ರರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರದ್ದು: ಸಿಎಂ ಬೊಮ್ಮಾಯಿ ಶ್ಲಾಘನೆ