
ಪ್ರಗತಿವಾಹಿನಿ ಸುದ್ದಿ; ಕಿತ್ತೂರು: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಕಂಠಿ ಅವರ ಪತ್ನಿ ಮರಿಬಸಮ್ಮ ಎಸ್ ಕಂಠಿ (104) ನಿಧನರಾಗಿದ್ದಾರೆ.
ಕಿತ್ತೂರಿನ ಸೈನಿಕ ಶಾಲೆಯಲ್ಲಿ ವಾಸವಾಗಿದ್ದ ಮರಿಬಸಮ್ಮ ಕಂಠಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಪತಿ ಸ್ಥಾಪನೆ ಮಾಡಿದ ಕಿತ್ತೂರಿನ ಸೈನಿಕ ಶಾಲೆಯಲ್ಲಿ ಮರಿಬಸಮ್ಮ ವಾಸವಾಗಿದ್ದರು. ನಾಳೆ ಕಿತ್ತೂರು ಸೈನಿಕ ಶಾಲೆಯಲ್ಲಿ ಬೆಳಿಗ್ಗೆ 8 ರಿಂದ 10ಗಂಟೆವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ. ಬಳಿಕ ನಾಳೆ ಬಾಗಲಕೋಟ ಜಿಲ್ಲೆ ಇಳಕಲ್ ನಲ್ಲಿ ಸಾಯಂಕಾಲ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ